ದಿನಾಂಕ: 10.03.2026ರಂದು ತೆಂಕನಿಡಿಯೂರು ಕಾಲೇಜಿನ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ, ಇಲ್ಲಿಯ ಗ್ರಂಥಾಲಯ, ಪ್ರಾಚ್ಯವಸ್ತು ಸಂಗ್ರಹಾಲಯ ಹಾಗೂ ಆರ್.ಆರ್.ಸಿ.ಯ ದಾಖಲೀಕರಣ ಮುಂತಾದ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಆಡಳಿತಾಧಿಕಾರಿಗಳಾದ ಡಾ. ಬಿ. ಜಗದೀಶ್ ಶೆಟ್ಟಿ ಹಾಗೂ ಆರ್.ಆರ್.ಸಿಯ ಸಹ ಸಂಶೋಧಕರಾದ ಡಾ. ಅರುಣ್ ಕುಮಾರ್ ಎಸ್.ಆರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಪನ್ಯಾಸಕರಾದ ಡಾ. ಮಹೇಶ್ ಕೆ.ಇ. ಹಾಗೂ ಡಾ. ಬಾಬು ಜೊತೆಗಿದ್ದರು.

