ಬೇಸಿಗೆ ಶಿಬಿರ
ಯಕ್ಷಗಾನ ಕೇಂದ್ರ ಇಂದ್ರಾಳಿ, ಮಾಹೆ, ಇವರ ಆಶ್ರಯದಲ್ಲಿ ಯಕ್ಷಗಾನ ಹೆಜ್ಜೆಗಾರಿಕೆ, ವೇಷಭೂಷಣ ಮತ್ತು ಬಣ್ಣಗಾರಿಕೆ ಶಿಬಿರವನ್ನು ಎಪ್ರಿಲ್ ೧೬, ೨೦೨೬ ರಿಂದ ಎಪ್ರಿಲ್ ೨೫, ೨೦೨೬ರವರೆಗೆ ಬೆಳಿಗ್ಗೆ ೯.೩೦ರಿಂದ ಮಧ್ಯಾಹ್ನ ೧೨.೩೦ರವರೆಗೆ ನಡೆಸಲಾಗುತ್ತದೆ. ಶಿಬಿರದಲ್ಲಿ ೧೫ ವರ್ಷಕ್ಕೆ ಮೇಲ್ಪಟ್ಟ ಯಕ್ಷಗಾನ ಆಸಕ್ತ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಬಹುದೆಂದು ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ/ ಹೆಸರು ನೋಂದಣಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕರೆಮಾಡಬಹುದು. ೯೯೦೧೧೯೦೩೯೨/ ೯೯೦೦೯೦೭೭೦೨/೯೯೪೫೨೪೫೧೪೪
No comments:
Post a Comment