Tuesday, June 2, 2026

ಶ್ರೀ ಸುಖಾನಂದ ಶೆಟ್ಟಿ ಅವರಿಗೆ ಡಾಕ್ಟರೇಟ್ (26.05.2026)

 


ಉಡುಪಿ: ಶ್ರೀ ಸುಖಾನಂದ ಶೆಟ್ಟಿ  ಅವರುಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದ ಕುರಿತಾಗಿ ನಡೆಸಿದ ಸಂಶೋಧನೆಗೆ ಮಣಿಪಾಲ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಅವರು ಸಂಶೋಧನೆಯನ್ನು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ (ಆರ್.ಆರ್.ಸಿ) ಮೂಲಕಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ರೇಖಾ ಬನ್ನಾಡಿ ಅವರ ಮಾರ್ಗದರ್ಶನದಲ್ಲಿ ನಡೆಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಎಚ್.ಬಿ. ಬಾಬಯ್ಯ ಶೆಟ್ಟಿ ಮತ್ತು ಶಾರದಾ ಬಿ.ಶೆಟ್ಟಿಯವರ ಪುತ್ರರಾದ ಇವರು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

No comments: