Thursday, June 4, 2026

2026-2027ನೇ ಸಾಲಿನ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಜಂಟಿ ಹೆಸರಿನ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಡಾ. ಬೋಳಾರ ಶಿವರಾಮ ಶೆಟ್ಟಿ ಆಯ್ಕೆ

 

ಕನ್ನಡ ಹಾಗೂ ತುಳು ಭಾಷೆ, ಸಾಹಿತ್ಯ, ಜಾನಪದ, ಸಂಶೋಧನ ಕ್ಷೇತ್ರಗಳಲ್ಲಿ ವಿದ್ವಾಂಸರಲ್ಲೊಬ್ಬರಾದ ಡಾ. ಬೋಳಾರ ಶಿವರಾಮ ಶೆಟ್ಟಿ ಅವರು ೨೦೨೬ನೇ ಸಾಲಿನ ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ (ಜಂಟಿ ಹೆಸರಲ್ಲಿ) ನೀಡಲಾಗುವ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಇವರಿಬ್ಬರ ನೆನಪಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪ್ರಶಸ್ತಿಯನ್ನು ನೀಡಲಾಗುವುದು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ ೨೦, ೨೦೨೬ರಂದು ನಡೆಯಲಿರುವುದು. ಪ್ರಶಸ್ತಿಯು ರೂ ೨೦೦೦೦/- ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಡಾ.  ಬಿ.  ಶಿವರಾಮ ಶೆಟ್ಟಿಯವರು ೧೯೫೭ರ ಅಕ್ಟೋಬರ್ ೩ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬೋಳಾರದಲ್ಲಿ ಜನಿಸಿದರು. ತಂದೆ ದಿವಂಗತ ಬೋಳಾರ ಚಂದಪ್ಪ ಶೆಟ್ಟಿ ಹಾಗೂ ತಾಯಿ ದಿವಂಗತ ಸೇಸಮ್ಮ. ಇವರು ಮೈಸೂರು ವಿಶ್ವವಿದ್ಯಾನಿಲಯದಿಂದ ಮಂಗಳ ಗಂಗೋತ್ರಿಯ ಕನ್ನಡ ಸ್ನಾತಕೋತ್ತರ ಮತ್ತು ಸಂಶೋಧನ ಕೇಂದ್ರದ ಮೂಲಕ ಸ್ನಾತಕೋತ್ತರ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದತುಳುನಾಡಿನ ಸಸ್ಯಜಾನಪದವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ೧೯೮೧ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಸಂಶೋಧನಾ ಸಹಾಯಕರಾಗಿ, ಉಪನ್ಯಾಸಕರಾಗಿ, ಪ್ರಾಧ್ಯಾಪಕ ಹಾಗೂ ಸಂಸ್ಥೆಯ ಅಧ್ಯಕ್ಷರಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ೨೦೧೯ರಲ್ಲಿ ನಿವೃತ್ತರಾದರು. 

 ಇವರ ಮಾರ್ಗದರ್ಶನದಲ್ಲಿ ೧೦ ಮಂದಿ ವಿದ್ಯಾರ್ಥಿಗಳು ಪಿಎಚ್.ಡಿ. ಪದವಿ ಪಡೆದಿದ್ದಾರೆ. ಕನ್ನಡ ಮತ್ತು ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಸಂಬಂಧಿಸಿದಂತೆ ೧೩೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ಮಂಡಿಸಿದ್ದಾರೆ. ಇವರ ಸಂಪಾದಕತ್ವದಲ್ಲಿ ಸುಮಾರು ೫೦ಕ್ಕೂ ಅಧಿಕ ಸಂಶೋಧನಾ ಲೇಖನಗಳು ಹಾಗೂ ೧೯ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಮಂಗಳೂರು ವಿ.ವಿ ಕನಕದಾಸ ಅಧ್ಯಯನ ಪೀಠ ಮತ್ತು ಸಂಶೋಧನ ಕೇಂದ್ರದ ಸಂಯೋಜಕರಾಗಿ ಹಲವು ಮಹತ್ವದ ಪ್ರಕಟಣೆಗಳನ್ನು  ಹೊರತರುವುದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಕನಕ ಚಿಂತನ ಪ್ರಚಾರೋಪನ್ಯಾಸ ಮಾಲಿಕೆಯಂತಹ ಅನೇಕ ಕನಕನಿಗೆ ಸಂಬಂಧಿಸಿದ ಯೋಜನೆಗಳನ್ನು ಜ್ಯಾರಿಗೊಳಿಸಿದ್ದಾರೆಶಿವರಾಮ ಶೆಟ್ಟಿ ಅವರು ಎಸ್. ವಿ.ಪಿ ಕನ್ನಡ ಅಧ್ಯಂiÀi ಸಂಸ್ಥೆಯ ಅಧ್ಯಕ್ಷರಾಗಿ ಕನ್ನಡ ಸಾಹಿತ್ಯ ಸಂಶೋಧನೆಗೆ ಸಂಬಂಧಪಟ್ಟ ವಿನೂತನ ಕಾರ್ಯಕ್ರಮಗಳೊಂದಿಗೆ ೧೯೬೮ರಿಂದ ಇಲ್ಲಿಯವರೆಗಿನ ವಿದ್ಯಾರ್ಥಿಗಳು, ಸಂಶೋಧನ ಪದವೀಧರರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಗಿಳಿವಿಂಡಿನ ಸ್ಥಾಪಕರೂ ಆಗಿದ್ದಾರೆ. ಅಲ್ಲದೆ ಯು.ಜಿ.ಸಿ ಸ್ಯಾಪ್ ಯೋಜನೆಯ ಸಂಯೋಜಕರಾಗಿ, ಗ್ಯಾನ್ ಯೋಜನೆಯ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಹೀಗೆ ನಿರಂತರ ಅಧ್ಯಯನ, ಅಧ್ಯಾಪನ, ಸಂಶೋಧನೆ, ಸಂಪಾದನೆ, ಸಂಘಟನೆಯ ಮೂಲಕ ಕ್ರಿಯಾಶೀಲರಾಗಿರುವ ಇವರು ಕರ್ನಾಟಕ ಸರ್ಕಾರದಕನಕ ಗೌರವಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಹಾಗೂ ಕರ್ನಾಟಕ ಸರಕಾರದ ೨೦೨೨-೨೩ನೇ ಸಾಲಿನಕನಕಶ್ರೀಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

No comments: