Wednesday, June 10, 2026

ಪ್ರಾದೇಶಿಕ ಜನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರಕ್ಕೆ ಡಾ. ಜಿ.ಶಂಕರ್ ಸ.ಮ.ಪ್ರ.ದ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರ ಭೇಟಿ

 



ದಿನಾಂಕ: ೦೨.೦೬.೨೦೨೬ರಂದು ಡಾ. ಜಿ.ಶಂಕರ್ ..ಪ್ರ. ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿಯ  ಗ್ರಂಥಾಲಯ, ಪ್ರಾಚ್ಯವಸ್ತು ಸಂಗ್ರಹಾಲಯ ಹಾಗೂ ಆರ್.ಆರ್.ಸಿಯ ದಾಖಲೀಕರಣ ಮುಂತಾದ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಆಡಳಿತಾಧಿಕಾರಿಗಳಾದ ಡಾ.ಬಿ. ಜಗದೀಶ್ ಶೆಟ್ಟಿ ಹಾಗೂ ಆರ್.ಆರ್.ಸಿಯ ಸಹ ಸಂಶೋಧಕರಾದ ಡಾ. ಅರುಣ್ ಕುಮಾರ್ ಎಸ್.ಆರ್ ಅವರಿಂದ ಪಡೆದರು. ಉಪನ್ಯಾಸಕರಾದ ಡಾ.ನಿಕೇತನ ಅವರು ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣಕ್ಕೆ ಬೇಕಾದ  ಎಲ್ಲಾ ಮಾಹಿತಿಗಳನ್ನು ಇಲ್ಲಿಂದಲೇ ಪಡೆದು ಶಿಕ್ಷಕರ, ವಿದ್ಯಾರ್ಥಿಗಳ ಪರಂಪರೆ ಮುಂದುವರಿಯಬೇಕೇಂಬುದಾಗಿ ತಿಳಿಸಿ, ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಅವರೊಂದಿಗೆ ಡಾ. ಪ್ರಸನ್ನಮೊದಲಾದ ಉಪನ್ಯಾಸಕರು ಹಾಜರಿದ್ದರು.



No comments: