ದಿನಾಂಕ: ೧೯.೦೯.೨೦೨೬ರಂದು ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ, ಪ್ರಥಮ ಹಾಗೂ ದ್ವಿತೀಯ ವರ್ಷದ ಲಲಿತಕಲಾ ಸಂಘದ ವಿದ್ಯಾರ್ಥಿಗಳು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರಕ್ಕೆ ಭೇಟಿ ನೀಡಿ, ಇಲ್ಲಿಯ ಗ್ರಂಥಾಲಯ, ಪ್ರಾಚ್ಯವಸ್ತು ಸಂಗ್ರಹಾಲಯದ ಮಾಹಿತಿ ಹಾಗೂ ಆರ್.ಆರ್.ಸಿಯ ದಾಖಲೀಕರಣ ಮುಂತಾದ ಕಾರ್ಯಚಟುವಟಿಕೆಗಳ ಮಾಹಿತಿಗಳನ್ನು ಆಡಳಿತಾಧಿಕಾರಿಗಳಾದ ಡಾ.ಬಿ. ಜಗದೀಶ್ ಶೆಟ್ಟಿ ಅವರಿಂದ ಪಡೆದರು. ಕಾಲೇಜಿನ ಆಡಳಿತ ನಿಕಾಯದ ಡೀನ್ ರಕ್ಷಿತ್ ರಾವ್, ಐ.ಕ್ಯೂ.ಎ.ಸಿ ಸಂಯೋಜಕರಾದ ದೀಪಿಕಾ ಜಿ ಹಾಗೂ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ನಿರ್ಮಲಾ ಬಿ. ಮಾರ್ಗದರ್ಶಕರಾಗಿ ಭಾಗವಹಿಸಿದ್ದರು.






No comments:
Post a Comment